ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ನಟ ದರ್ಶನ್ ಆ್ಯಂಡ್ ಗ್ಯಾಂಗ್ ಕಸ್ಟಡಿ ಅಂತ್ಯಗೊಂಡಿರುವ ಹಿನ್ನೆಲೆ ಇಂದು ನ್ಯಾಯಾಲಯದಲ್ಲಿ ವಿಚಾರಣೆ ನಡೆಯಿತು. ಆರೋಪಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿದ್ರು. ವಿಚಾರಣೆ ನಡೆಸಿದ ನ್ಯಾಯಾಧೀಶರು ದರ್ಶನ್ ಆ್ಯಂಡ್ ಗ್ಯಾಂಗ್ಗೆ 13 ದಿನಗಳ ಕಾಲ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ.
ವಿಚಾರಣೆ ನಡೆಸಿದ ನ್ಯಾಯಾಧೀಶರು ದರ್ಶನ್ ಆ್ಯಂಡ್ ಗ್ಯಾಂಗ್ಗೆ ಸೆಪ್ಟೆಂಬರ್ 30ರವರೆಗೂ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ.
ದರ್ಶನ್ ಅಂಡ್ ಗ್ಯಾಂಗ್ ವೀಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿದ್ದು, 24 ನೇ ಎಸಿಎಂಎಂ ಕೋರ್ಟ್ನಲ್ಲಿ ನ್ಯಾಯಾಧೀಶರು. ಒಬೊಬ್ಬರ ಹೆಸರನ್ನು ಕರೆದು ಈ ವೇಳೆ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳು ಕೈ ಎತ್ತುವ ಮೂಲಕ ಹಾಜರಾತಿ ಖಚಿತಪಡಿಸಿದ್ದಾರೆ.
ಈಗಾಗಲೇ ರೇಣುಕಾಸ್ವಾಮಿ ಪ್ರಕರಣದ ಕುರಿತ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದ ತನಿಖಾಧಿಕಾರಿಗಳು ಇಂದು ಪೆಂಡಿಂಗ್ ಇದ್ದ CSFL ರಿಪೋರ್ಟ್ ಅನ್ನು ಸಹ ಕೋರ್ಟ್ ನೀಡಿದ್ದಾರೆ. ಹಾರ್ಡ್ ಡಿಸ್ಕ್ ಹಾಗೂ ಪೆನ್ ಡ್ರೈವ್ ನಲ್ಲಿ ದಾಖಲೆಗಳ ಸಲ್ಲಿಕೆ ಮಾಡಿದ್ದಾರೆ. ಜೊತೆಗೆ ಎಲ್ಲಾ 17 ಆರೋಪಿಗಳಿಗ ಕೆಲ ಟೆಕ್ನಿಕಲ್ ಎವಿಡೆನ್ಸ್ ಕೂಡ ತನಿಖಾಧಿಕಾರಿಗಳು ನ್ಯಾಯಾಲಯಕ್ಕೆ ನೀಡಿದ್ದಾರೆ.
ಜೈಲಿನಲ್ಲಿ ನಟ ದರ್ಶನ್ ಅವರನ್ನು ಭೇಟಿಯಾಗಲು ಫ್ಯಾಮಿಲಿ ಹಾಗೂ ಸ್ನೇಹಿತರಿಗೆ ಅವಕಾಶ ಕೊಡ್ತಾ ಇಲ್ಲ ಎಂದು ನಟ ದರ್ಶನ್ ಪರ ವಕೀಲರು ವಾದ ಮಂಡಿಸಿದ್ರು. ಕೂಡಲೇ ವೀಡಿಯೋ ಕಾನ್ಫರೆನ್ಸ್ ಮೂಲಕ ದರ್ಶನ್ ಜೊತೆ ಮಾತನಾಡಲು ನ್ಯಾಯಾಧೀಶರು ಮುಂದಾದ್ರು. ಬಳಿಕ ಸ್ನೇಹಿತರು ಹಾಗೂ ಕುಟುಂಬಸ್ಥರ ಭೇಟಿಗೆ ಅವಕಾಶ ನೀಡುವಂತೆ ಜೈಲಾಧಿಕಾರಿಗಳಿಗೆ ನ್ಯಾಯಾಧೀಶರಿಗೆ ಸೂಚನೆ ನೀಡಿದ್ದಾರೆ.
ಬಳ್ಳಾರಿ ಜೈಲಿನಲ್ಲಿ ಕೂರಲು ನಟ ದರ್ಶನ್ ಅವರಿಗೆ ಪ್ಲಾಸ್ಟಿಕ್ ಚೇರು ಕೂಡ ಸಿಗ್ತಿಲ್ಲ. ನಟ ದರ್ಶನ್ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಹಿನ್ನೆಲೆ ನಟ ದರ್ಶನ್ ಅವರಿಗೆ ಕೂರಲು ಚೇರು ನೀಡಲು ಅವಕಾಶ ನೀಡ್ಬೇಕು ಎಂದು ನಟ ದರ್ಶನ್ ಪರ ವಕೀಲರು ನ್ಯಾಯಾಧೀಶರ ಮುಂದೆ ಮನವಿ ಮಾಡಿದ್ರು. ಜೈಲಿನ ನಿಯಮದ ಪ್ರಕಾರ ಏನು ಕೊಡ್ಬೇಕು ಅದನ್ನು ಕೊಡ್ತಾರೆ ಬಿಡಿ ಎಂದು ನ್ಯಾಯಾಧೀಶರು ಹೇಳಿದ್ರು.
ಒಂದು ಪೆನ್ ಡ್ರೈವ್ ಹಾಗೂ ಒಂದು ಹಾರ್ಡ್ ಡಿಸ್ಕ್ ನಲ್ಲಿ CFSL ರಿಪೋರ್ಟ್ ಅನ್ನು ತನಿಖಾಧಿಕಾರಿಗಳು ಕೋರ್ಟ್ ಗೆ ಸಲ್ಲಿಕೆ ಮಾಡಿದ್ದಾರೆ. ಆರೋಪಿ ವಿನಯ್ ಮೊಬೈಲ್ ನ ಮತ್ತೊಮ್ಮೆ FSL ಗೆ ಕಳುಹಿಸಲು ಕೋರ್ಟ್ ಗೆ ಮನವಿ ಮಾಡಲಾಗಿದೆ. ಮೊಬೈಲ್ ನಲ್ಲಿ ಇನ್ನು ಕೆಲ ಸಾಕ್ಷ್ಯಗಳ ಸಂಗ್ರಹ ಆಗಬೇಕಿದೆ ಅಂದ ತನಿಖಾಧಿಕಾರಿ ತಿಳಿಸಿದ್ದಾರೆ.