ಬೆಂಗಳೂರು: ಇತ್ತೀಚೆಗೆ ಕಾಮುಕರ ಅಟ್ಟಹಾಸ ಹೆಚ್ಚಾಗುತ್ತಿದೆ. ಆದರೆ ಹರೆಯದ ಮಕ್ಕಳು ಕೂಡ ಇಂತಹ ನೀಚ ಕೃತ್ಯ ಎಸಗುತ್ತಿರುವುದು ಶೋಚನೀಯ. ಬೆಂಗಳೂರಿನ ಹಾರೋಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂತಹ ಶಾಕಿಂಗ್ ಘಟನೆಯೊಂದು ನಡೆದಿದೆ. 15 ವಯಸ್ಸಿನ ಬಾಲಕನೊಬ್ಬ 18 ತಿಂಗಳ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ವರದಿಯಾಗಿದೆ. ಇನ್ನು ಲೈಂಗಿಕ ದೌರ್ಜನ್ಯದ ಆರೋಪ ಹಿನ್ನೆಲೆ ಬಾಲಕನನ್ನು ಪೊಲೀಸರು ಬಂಧಿಸಿದ್ದಾರೆ.
15ರ ಬಾಲಕ ಮಗುವನ್ನು ಆಟ ಆಡಿಸುವುದಾಗಿ ಹೇಳಿ ಅಲ್ಲೆ ಪಕ್ಕದ ದೇವಾಲಯದ ಬಳಿ ಕರೆದುಕೊಂಡು ಹೋಗಿದ್ದಾನಂತೆ. ನಂತರ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂದು ತಿಳಿದುಬಂದಿದೆ. ಮಗುವಿನ ಕುಟುಂಬ ಇದೇ ದೇವಾಲಯದ ಪಕ್ಕದಲ್ಲಿ ವಾಸವಿರುವುದಾಗಿ ತಿಳಿದುಬಂದಿದೆ.
ಇನ್ನು ಈ ಘಟನೆ ಸೆಪ್ಟೆಂಬರ್ 17 ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಹಾರೋಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ಆರಂಭಿಸಿದ್ದಾರೆ.