ಚಂಡೀಗಢ: ಹರಿಯಾಣದ ಪಾಣಿಪತ್‌ನಲ್ಲಿ ನಾಲ್ವರು ಕುಟುಂಬವು ವಾಸಿಸುತ್ತಿರುವ ಮನೆಗೆ ರಾತ್ರಿ 1 ಗಂಟೆ ಸುಮಾರಿಗೆ ನುಗ್ಗಿದ ನಾಲ್ವರು ಶಸ್ತ್ರಧಾರಿ ಅಪರಿಚಿತರು, ಕುಟುಂಬದ ಸದಸ್ಯರನ್ನು ಹಗ್ಗದಿಂದ ಕಟ್ಟಿಹಾಕಿದ್ದರು. ಬಳಿಕ ಮೂವರು ಮಹಿಳಾ ಕಾರ್ಮಿಕರ ಮೇಲೆ ಬರ್ಬರವಾಗಿ ಅತ್ಯಾಚಾರ ಎಸಗಿದರು ಎಂದು ದೂರಿನಲ್ಲಿ ತಿಳಿಸಲಾಗಿದೆ. ಇದರ ಬಳಿಕ ಆರೋಪಿಗಳು ಮನೆಯಲ್ಲಿದ್ದ ನಗದು ಮತ್ತು ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ಬುಧವಾರ ತಡರಾತ್ರಿ ನಡೆದಿದ್ದು, ಆರೋಪಿಗಳು ಚಾಕುಗಳು ಮತ್ತು ಇತರ ಹರಿತವಾದ ಆಯುಧಗಳಿಂದ ಶಸ್ತ್ರಸಜ್ಜಿತರಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.ಈ ಮಹಿಳೆಯರ ಗಂಡಂದಿರು ಮತ್ತು ಮಕ್ಕಳ ಎದುರೇ ನಾಲ್ವರು ಮುಸುಕುಧಾರಿ ವ್ಯಕ್ತಿಗಳು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಈ ಮಹಿಳೆಯರು 24, 25 ಮತ್ತು 35 ವರ್ಷದವರಾಗಿದ್ದಾರೆ. ಫಿಶ್ ಫಾರ್ಮ್ ಒಂದನ್ನು ಗುರಿಯಾಗಿಸಿ ದುಷ್ಕರ್ಮಿಗಳು ದಾಳಿ ನಡೆಸಿದ್ದು, ಅಲ್ಲಿ ಕೆಲಸ ಮಾಡುವ ಕುಟುಂಬದವರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಹಣ ದೋಚಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಾಮೂಹಿಕ ಅತ್ಯಾಚಾರ ಸಂಭವಿಸಿದ ಸ್ಥಳದಿಂದ ಸುಮಾರು ಒಂದು ಕಿಮೀ ದೂರದಲ್ಲಿ ಬುಧವಾರ ತಡರಾತ್ರಿ ನಡೆದ ಪ್ರತ್ಯೇಕ ಘಟನೆಯಲ್ಲಿ, ಅಸ್ವಸ್ಥ ಮಹಿಳೆಯ ಮೇಲೆ ದಾಳಿ ಮಾಡಲಾಗಿದ್ದು, ಆಕೆಯ ಸಾವಿಗೆ ಕಾರಣವಾಯಿತು, ಆಕೆಯ ಪತಿಯನ್ನು ದರೋಡೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದಾಳಿಕೋರರು ದಂಪತಿಯ ಮನೆಗೆ ಬಲವಂತವಾಗಿ ನುಗ್ಗಿ ದೈಹಿಕವಾಗಿ ಹಲ್ಲೆ ನಡೆಸಿದ್ದರಿಂದ ಎರಡನೇ ಘಟನೆಯಲ್ಲಿ ಅದೇ ವ್ಯಕ್ತಿಗಳು ಭಾಗಿಯಾಗಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ. ಅವರು ವ್ಯಕ್ತಿಯಿಂದ ಸ್ವಲ್ಪ ನಗದು ಮತ್ತು ಮೊಬೈಲ್ ಫೋನ್ ಅನ್ನು ದೋಚಿದ್ದಾರೆ.

ಎರಡೂ ಘಟನೆಗಳು ಒಂದೇ ಗ್ರಾಮದಲ್ಲಿ ನಡೆದಿವೆ ಎಂದು ಪಾಣಿಪತ್‌ನ ಮಟ್ಲೌಡಾ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ ವಿಜಯ್ ಹೇಳಿದ್ದಾರೆ.ತನಿಖೆ ನಡೆಯುತ್ತಿದೆ… ಇಲ್ಲಿಯವರೆಗೆ ಯಾರನ್ನೂ ಬಂಧಿಸಲಾಗಿಲ್ಲ,” ಎಂದು ಅವರು ಹೇಳಿದರು.