ಪಡ್ಡೆ ಹುಡುಗರ ಕನಸಸಿನ ರಾಣಿ ಬಾಲಿವುಡ್ ನಟಿ ಪೂನಂ ಪಾಂಡೆ ಕಳೆದ ಕೆಲ ದಿನಗಳ ಹಿಂದೆಯಷ್ಟೇ ಬಹುಕಾಲದ ಗೆಳೆಯ ಸ್ಯಾಮ್ನನ್ನು ವರಿಸಿದ್ದರು. ಆದರೆ ಈಗ ಗಂಡನ ವಿರುದ್ಧವೇ ದೂರು ನೀಡಿದ್ದಾರೆ.
ಹೌದು ಪೂನಂ ಪಾಂಡೆ ತನ್ನ ಪತಿಯ ವಿರುದ್ಧ ದೂರು ದಾಖಲಿಸಿದ್ದಾರೆ. ನನಗೆ ಕಿರುಕುಳ ನೀಡಿ ಬೆದರಿಕೆ ಹಾಕಿ ಹಲ್ಲೆ ಮಾಡಿದ್ದಾನೆ ಎಂದು ಪೂನಂ ಪೊಲೀಸರಿಗೆ ದೂರು ನೀಡಿದ್ದಾರೆ. ಹೀಗಾಗಿ ಪೂನಂ ಪಾಂಡೆ ಗಂಡ ಸ್ಯಾಮ್ ಬಾಂಬೆಯನ್ನು ಪೊಲೀಸರು ಗೋವಾದಲ್ಲಿ ಅರೆಸ್ಟ್ ಮಾಡಿದ್ದಾರೆ.
ಕಳೆದ ಸೆಪ್ಟೆಂಬರ್ 11ರಂದು ಪೂನಂ ಪಾಂಡೆ ತನ್ನ ಬಹುಕಾಲದ ಗೆಳೆಯ ಸ್ಯಾಮ್ ಬಾಂಬೆಯನ್ನು ವಿವಾಹವಾಗಿದ್ದರು. ಗೋವಾದ ಕೆನಕೋನಾದಲ್ಲಿ ಪೂನಂ ಪಾಂಡೆ ಶೂಟಿಂಗ್ನಲ್ಲಿ ಭಾಗಿಯಾಗಿದ್ದ ವೇಳೆ ಈ ಘಟನೆ ನಡೆದಿದೆ. ಸ್ಯಾಮ್ ಅಲ್ಲಿಗೆ ಬಂದು ಪೂನಂ ಮೇಲೆ ಹಲ್ಲೆ ಮಾಡಿ, ಕಿರುಕುಳ ನೀಡಿ ಬೆದರಿಕೆ ಹಾಕಿದ್ದಾರೆ ಎಂದು ಕೆನಕೋನಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಮೂರು ದಿನಗಳ ಹಿಂದೆಯಷ್ಟೇ ಹನಿಮೂನ್ ಫೋಟೋ, ವಿಡಿಯೋಗಳನ್ನು ಪೂನಂ ಪಾಂಡೆ ಶೇರ್ ಮಾಡಿಕೊಂಡು, ‘ದಿ ಬೆಸ್ಟ್ ಹನಿಮೂನ್’ ಎಂದು ಕ್ಯಾಪ್ಶನ್ ನೀಡಿದ್ದರು. ಇದೀಗ ಗಂಡನನ್ನೇ ದೂರಿದ್ದಲ್ಲದೆ, ಅವರನ್ನೇ ಪೊಲೀಸರ ಅತಿಥಿಯನ್ನಾಗಿಸಿದ್ದಾರೆ.
ಸೆಪ್ಟೆಂಬರ್ 11, 2020 ರಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಪೂನಂ, ಮದುವೆಯ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು, ‘ನಿಮ್ಮೊಂದಿಗೆ ಏಳು ಜನ್ಮ ಎದುರು ನೋಡುತ್ತಿದ್ದೇನೆ’ ಎಂದು ಕ್ಯಾಪ್ಶನ್ ನೀಡಿದ್ದರು. ಕಳೆದ ಜುಲೈ ತಿಂಗಳಲ್ಲಿ ಬಹುಕಾಲದ ಗೆಳೆಯ ಸ್ಯಾಮ್ ಬೊಂಬೆ ಜೊತೆ ಪೂನಂ ನಿಶ್ಚಿತಾರ್ಥ ಮಾಡಿಕೊಂಡಿದ್ದರು. 46 ವರ್ಷದ ಸ್ಯಾಮ್ ಬೊಂಬೆ ಮೂಲತಃ ನಿರ್ದೇಶಕರು. ಈ ಜೋಡಿಯ ನಿಶ್ಚಿತಾರ್ಥ ಹಾಗೂ ಮದುವೆಗೆ ಅನೇಕರು ಸೋಶಿಯಲ್ ಮೀಡಿಯಾದಲ್ಲಿ ಶುಭ ಕೋರಿದ್ದರು.