ಬೆಂಗಳೂರು : ನಾಳೆ 68ನೇ ಕರ್ನಾಟಕ ರಾಜ್ಯೋತ್ಸವ ಆಚರಣೆಗೆ ರಾಜ್ಯಾದ್ಯಂತ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಈ ಶುಭ ಸಂದರ್ಭದಲ್ಲಿ ನಾಡಿನ ವಿವಿಧ ಸಾಧಕರನ್ನು ಗುರುತಿಸಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸುವ ಪರಿಪಾಠ ಬೆಳೆದು ಬಂದಿದೆ. ಇದೀಗ 2023ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿ ಹೊರಬಿದ್ದಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಆಯ್ಕೆ ಸಮಿತಿ ಸಭೆಯಲ್ಲಿ ವಿವಿಧ ಸಾಧಕರ ಹೆಸರನ್ನು ಫೈನಲ್ ಮಾಡಲಾಗಿದೆ. ಇಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಗಂಡಗಿ ವಿಕಾಸಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ, ಪ್ರಶಸ್ತಿ ವಿಜೇತರು ಮತ್ತು ಪ್ರಶಸ್ತಿ ವಿಜೇತ ಸಂಘ ಸಂಸ್ಥೆಗಳ ಹೆಸರನ್ನು ಬಿಡುಗಡೆ ಮಾಡಿದ್ದಾರೆ.

ಎಲ್ಲ ಜಿಲ್ಲೆಗಳಿಗೂ ಒಂದೊಂದು ಪ್ರಶಸ್ತಿ ನೀಡಿದ್ದೇವೆ, 10 ಸಂಘ ಸಂಸ್ಥೆಗಳಿಗೆ ಈ ಬಾರಿ ಪ್ರಶಸ್ತಿ ನೀಡಿದ್ದೇವೆ. ನೂರು ವರ್ಷ ದಾಟಿದವರು ಇಬ್ಬರು ಪ್ರಶಸ್ತಿ ಪಡೆಯಲಿದ್ದಾರೆ, ಎಲ್ಲ ಕ್ಷೇತ್ರಗಳನ್ನ ನಾವು ಪರಿಗಣನೆ ಮಾಡಿದ್ದೇವೆ ಅಂತ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ.

ಇನ್ನು ಇಸ್ರೋ ಸಂಸ್ಥೆ ಚೇರ್ಮನ್ ಎಸ್ ಸೋಮನಾಥ್ ಅವರಿಗೂ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲು ಸರ್ಕಾರ ನಿರ್ಧರಿಸಿದೆ. ಈ ಬಾರಿ 12 ಮಹಿಳೆಯರು, ಒಬ್ಬರು ಮಂಗಳಮುಖಿಗೆ ಪ್ರಶಸ್ತಿ ನೀಡಲಾಗುತ್ತದೆ. ಇನ್ನುಳಿದಂತೆ ಸಿನಿಮಾ ಕ್ಷೇತ್ರದಿಂದ ಹಿರಿಯ ಪೋಷಕ ನಟರಾದ ಡಿಂಗ್ರಿ ನಾಗರಾಜ್ ಹಾಗೂ ಬ್ಯಾಂಕ್ ಜನಾರ್ಧನ್ ಅವರಿಗೆ ಹಾಗೂ ನ್ಯಾಯಾಂಗ ಕ್ಷೇತ್ರದಿಂದ ಜಸ್ಟೀಸ್ ವಿ. ಗೋಪಾಲಗೌಡ ಅವರನ್ನು ಪ್ರಶಸ್ತಿಗೆ ಪರಿಗಣಿಸಲಾಗಿದೆ.

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯು 25 ಗ್ರಾಂ ಚಿನ್ನದ ಪದಕ ಹಾಗೂ 5 ಲಕ್ಷ ನಗದು ಒಳಗಡಿರುತ್ತದೆ. ಎಲ್ಲ ಅರ್ಹರನ್ನು ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ನಾಳೆ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್‌ ತಂಗಡಗಿ ತಿಳಿಸಿದ್ದಾರೆ.
ಹೆಚ್ಚುವರಿಯಾಗಿ, ಕನ್ನಡ ನಾಡಿಗೆ ಅಸಾಧಾರಣ ಸೇವೆಯನ್ನು ಪ್ರದರ್ಶಿಸಿದ 10 ಸಂಘಗಳು ಮತ್ತು ಸಂಸ್ಥೆಗಳನ್ನು ಸರ್ಕಾರ ಗುರುತಿಸಿದೆ. ಪತ್ರಕರ್ತರಾದ ದಿನೇಶ್ ಅಮಿನಮಟ್ಟು, ಚಾರ್ಮಾಡಿ ಹಸನಬ್ಬ, ಹಾಜಿ ಅಬ್ದುಲ್ಲಾ ಪರ್ಕಳ, ಕೆ.ಶರೀಫಾ, ಹುಸೇನಬಿ ಬುದೈನ್ ಸಾಬ್ ಸೇರಿದಂತೆ ಹಲವಾರು ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗಿದ್ದು, ಪತ್ರಿಕೋದ್ಯಮ ಮತ್ತು ಸಮಾಜಕ್ಕೆ ಅವರು ನೀಡಿದ ಮಹತ್ವದ ಕೊಡುಗೆಯನ್ನು ಎತ್ತಿ ಹಿಡಿದಿದ್ದಾರೆ. ಪ್ರತಿಷ್ಠಿತ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದ ದಕ್ಷಿಣ ಕನ್ನಡ ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟ ಅವರ ಪ್ರಭಾವಶಾಲಿ ಸೇವೆಗಾಗಿ ಗುರುತಿಸಲ್ಪಟ್ಟ ಗಮನಾರ್ಹ ಸಂಸ್ಥೆಗಳಲ್ಲಿ ಒಂದಾಗಿದೆ.