ಮುಂಬೈ: ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಮಂಗಳವಾರ ರಿಯಾ ಚಕ್ರವರ್ತಿಯನ್ನು ಬಂಧಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಎನ್ಸಿಬಿ ನಟಿ ರಿಯಾ ಚಕ್ರವರ್ತಿ ಮತ್ತು ಆಕೆಯ ಸಹೋದರ ಶೌವಿಕ್ ಚಕ್ರವರ್ತಿಯನ್ನು ವಿಚಾರಣೆ ನಡೆಸುತ್ತಿದ್ದರು. ಇದೀಗ ಎನ್ಸಿಬಿ ನಟಿಯನ್ನು ಬಂಧಿಸಿದ್ದಾರೆ.
ಇನ್ನು ವಿಚಾರಣೆ ವೇಳೆ, ರಿಯಾ ಚಕ್ರವರ್ತಿ ಎನ್ಸಿಬಿ ಅಧಿಕಾರಿಗಳ ಎದುರು ತಾನು ಡ್ರಗ್ಸ್ ಸೇವಿಸುತ್ತಿದ್ದಾಗಿ ಹೇಳಿದ್ದರು. ಸಿಗರೇಟ್ನಲ್ಲಿ ಮಾರಿಜುವಾನಾ ಮಿಕ್ಸ್ ಮಾಡಿಕೊಂಡು ಸೇದುತ್ತಿದ್ದಾಗಿ ಹೇಳಿದ್ದರು. ಅಷ್ಟೇ ಅಲ್ಲ, ಸುಶಾಂತ್ ಸಿಂಗ್ ಸಹ ತಮ್ಮ ಜತೆಗೆ ಡ್ರಗ್ಸ್ ತೆಗೆದುಕೊಳ್ಳುತ್ತಿದ್ದುದಾಗಿ ಹೇಳಿಕೊಂಡಿದ್ದರು.
ಇನ್ನಷ್ಟು ಮಾಹಿತಿ ಹೊರ ಹಾಕಿರುವ ರಿಯಾ, ಸುಶಾಂತ್ ಅಷ್ಟೇ ಅಲ್ಲ, ಬಾಲಿವುಡ್ನಲ್ಲಿ 25ಕ್ಕೂ ಹೆಚ್ಚು ಸೆಲೆಬ್ರಿಟಿಗಳಿಗೆ ಡ್ರಗ್ಸ್ ಅಭ್ಯಾಸವಿದೆ ಮತ್ತು ಪಾರ್ಟಿಗಳಲ್ಲಿ ಅವರೆಲ್ಲಾ ಡ್ರಗ್ಸ್ ತೆಗೆದುಕೊಳ್ಳುತ್ತಾರೆ ಎಂದು ಆರೋಪಿಸಿದ್ದಾರೆ. ಈ ಆರೋಪದಡಿ ಸದ್ಯದಲ್ಲೇ ಹಲವರ ಮೇಲೆ ಕ್ರಮ ಕೈಗೊಳ್ಳುವ ನಿರೀಕ್ಷೆ ಇದೆ.
ರಿಯಾ ಜೊತೆಗೆ ಸುಶಾಂತ್ ಸಿಂಗ್ ಸಹೋದರಿ ಪ್ರಿಯಾಂಕಾ ಸಿಂಗ್, ಡಾ.ತರುಣ್ ಕುಮಾರ್ ಮತ್ತು ಇತರರ ವಿರುದ್ಧ ಭಾರತೀಯ ದಂಡ ಸಂಹಿತೆಯ ವಿವಿಧ ವಿಭಾಗಗಳು ಮತ್ತು ಮುಂಬೈನ ಬಾಂದ್ರಾ ಪೊಲೀಸ್ ಠಾಣೆಯಲ್ಲಿ ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್ಸ್ಟೆನ್ಸಸ್ (ಎನ್ಡಿಪಿಎಸ್) ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.