ಜೈಪುರ: 19 ವರ್ಷದ ಯುವತಿಯನ್ನು ಇಬ್ಬರು ಯುವಕರು ಸೇರಿ 4 ವರ್ಷಗಳಿಗಿಂತ ಹೆಚ್ಚು ಕಾಲ ಪದೇ ಪದೇ ಅತ್ಯಾಚಾರ ಎಸಗಿದ ಘಟನೆ ರಾಜಸ್ಥಾನದ ಉದಯಪುರ ಜಿಲ್ಲೆಯಲ್ಲಿ ನಡೆದಿದೆ.

ಯುವತಿ 4 ವರ್ಷಗಳ ಹಿಂದೆ ತನ್ನ ಅಜ್ಜಿಯ ಜೊತೆ ವಾಸವಿದ್ದಾಗ ಯುವಕನೊಬ್ಬನ ಪರಿಚಯವಾಗಿತ್ತು. ಆತ ಆಕೆಯನ್ನ ತನ್ನ ಮನೆಗೆ ಕರೆದು ಮಾನಭಂಗ ಎಸಗಿದ್ದ. ಅದನ್ನು ಆ ಯುವಕ ವಿಡಿಯೋ ಮಾಡಿ ತನ್ನ ಸ್ನೇಹಿತನೊಂದಿಗೆ ಹಂಚಿಕೊಂಡಿದ್ದಾನೆ. ಬಳಿಕ ಇಬ್ಬರು ಯುವಕರು ಆ ವಿಡಿಯೋ ಬಳಸಿಕೊಂಡು ಆಕೆಗೆ ಬೆದರಿಕೆ ಹಾಕಿ 4 ವರ್ಷಗಳ ಕಾಲ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ.

ಆದರೆ ಇತ್ತೀಚೆಗೆ ಮನೆಗೆ ನುಗ್ಗಿ ಆಕೆಯ ಮೇಲೆ ಮಾನಭಂಗಕ್ಕೆ ಯತ್ನಿಸಿದಾಗ ಆಕೆಯ ಮನೆಯವರ ಕೈಗೆ ಸಿಕ್ಕಿಹಾಕಿಕೊಂಡು ಕೃತ್ಯ ಬಯಲಾಗಿದೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.